ಬೆಂಗಳೂರು : ಹಿಜಾಬ್ ವಿಚಾರವನ್ನು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ನಂತರ ಕಾನೂನಿನ ಅಡಿಯಲ್ಲೇ ಕ್ರಮ ತಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ಹಿಜಬ್ ನಿಷೇಧ ವಾಪಸ್ ಪಡೆಯುವ ಸಂಬಂಧಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮಧು ಬಂಗಾರಪ್ಪ, ಈ ವೇಳೆ ಹಿಜಾಬ್ ವಿಚಾರದಲ್ಲಿ ಸಿಎಂ ಹೇಳಿಕೆ ನೀಡಿದ್ದು, ಕಾನೂನು ಏನು ಹೇಳುತ್ತದೆ ಎಂಬುದನ್ನ ನೋಡಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ನಂತರ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಈ ಹೇಳಿಕೆಯಿಂದ ಶಾಲಾ ಕಾಲೇಜುಗಳಲ್ಲಿ ಗೊಂದಲ ಆಗಿದ್ದರೆ, ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದು ಚರ್ಚೆ ಮಾಡಿ ನಿರ್ದೇಶನ ನೀಡುತ್ತೇನೆ ಎಂದರು.
ಇದು ಸೂಕ್ಷ್ಮವಾದ ವಿಚಾರವಾಗಿದ್ದು, ಎಲ್ಲಾ ಸಾಧಕ-ಬಾಧಕಗಳ ಇದರ ಬಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸುತ್ತೇವೆ. ನಂತರ ನಾವು ಏನೇ ತೀರ್ಮಾನ ಮಾಡಿದರೂ ಅದು ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.