Political NewsState News

ನಿತೀಶ್ ಬಿಜೆಪಿಗೆ ಸೇರುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ; ಪ್ರಹ್ಲಾದ್ ಜೋಶಿ

ಬೆಂಗಳೂರು:- ನಿತೀಶ್ ಕುಮಾರ್ ಬಿಜೆಪಿಗೆ ಸೇರುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಪಕ್ಷಗಳ ನಡುವೆ ಬಿರುಕು ಮೂಡಿರುವ ಬಗ್ಗೆ ಜೋಶಿ, ಐಎನ್​ಡಿಐಎ ಮೈತ್ರಿ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ. ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು. ಹಾಗಾಗಿ ಐಎನ್​ಡಿಐಎ ಒಕ್ಕೂಟ ಸಾಯುತ್ತಿದೆ. ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ನಾನು ಏನೂ ಮಾತಾಡಲ್ಲ. ಅವರು ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ ಎಂದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!