ಬೆಂಗಳೂರು : ಕಾಂಗ್ರೆಸ್ಸಿನ ಬಿ.ಕೆ.ಹರಿಪ್ರಸಾದ್ ಸಾಮಾನ್ಯ ವ್ಯಕ್ತಿ ಅಲ್ಲ. ಅವರೂ ಹೇಳಿಕೆ ಕೊಟ್ಟಿದ್ದಾರೆ. ಆದ್ದರಿಂದ ಅಹಿತಕರ ಘಟನೆ ಆಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ವಹಿಸಲಿ ಎಂದು ಅವರು ಪ್ರಶ್ನೆಗೆ ಉತ್ತರವಾಗಿ ಒತ್ತಾಯಿಸಿದರು. ಬಿ.ಕೆ.ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿದೆಯೇ ಅಥವಾ ಕೇಂದ್ರ ಸರಕಾರವೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ನುಡಿದರು.
ಶ್ರೀರಾಮನು ವಾನರ ಸೇನೆಯನ್ನು ಒಗ್ಗೂಡಿಸಿದ್ದು ಕೂಡ ಕರ್ನಾಟಕದಲ್ಲೇ ಎಂದು ಉಲ್ಲೇಖಿಸಿದರು. ತೊರವೆ ರಾಮಾಯಣ ಮೇರುಕೃತಿ ಎಂದ ಅವರು, ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತದ ಸಂಸ್ಕøತಿಯ ಪುನರುಜ್ಜೀವನ ಆಗುತ್ತಿದೆ. ಇದು ರಾಮಭಕ್ತರು, ಹಿಂದೂಗಳಲ್ಲಿ ಸಂತಸಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿ ಆಗುತ್ತಿದೆ. ಉಜ್ಜೈನಿ ಅಭಿವೃದ್ಧಿ, ನಮೋ ಗಂಗೆ ಕಾರ್ಯಕ್ರಮಗಳು ಪ್ರಾಚೀನ ಪರಂಪರೆಯ ಪುನರುಜ್ಜೀವನಕ್ಕೆ ಸಾಕ್ಷಿ. ನರೇಂದ್ರ ಮೋದಿಜೀ ಅವರ ದೂರದೃಷ್ಟಿ ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ ಸರಕಾರ ಗೊಂದಲ, ದ್ವಂದ್ವ ನಿಲುವಿನಲ್ಲಿದೆ. ರಾಜ್ಯ ಸರಕಾರವು ಕರಸೇವಕ ಶ್ರೀಕಾಂತ ಪೂಜಾರಿಯನ್ನು ದುರುದ್ದೇಶದಿಂದ ಬಂಧಿಸಿತ್ತು. ದೇಶದಲ್ಲಿ ಕುಣಿದು ಕುಪ್ಪಳಿತದ ವಾತಾವರಣವನ್ನು ಕಲುಷಿತಗೊಳಿಸಲು ಈ ಬಂಧನ ನಡೆದಿತ್ತು ಎಂದು ಟೀಕಿಸಿದರು.
ಕಾಂಗ್ರೆಸ್ಸಿಗರು ಎಲ್ಲೆಡೆ ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಅಲ್ಪಸಂಖ್ಯಾತರಿಗೆ ದುಃಖದ ಆತಂಕ ಅವರಲ್ಲಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಮತ್ತು ರಾಮಭಕ್ತರ ಕುರಿತ ತಿರಸ್ಕಾರದ ನಡವಳಿಕೆ ಸಾಕಷ್ಟು ಟೀಕೆಗೆ ಒಳಗಾಗಿದೆ ಎಂದು ವಿವರಿಸಿದರು.