State News

ರಾಜ್ಯದಲ್ಲಿ ಇನ್ನೂ ಡಿ. 2ರವರೆಗೂ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಮಳೆ ಬಂದಿದೆ. ಇನ್ನು ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉಡುಪಿ,ಮಂಗಳೂರು ವಿಮಾನನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆಯಾಗಿದೆ. ದಾವಣಗೆರೆ ಹಾಗೂ ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!