ಬೆಂಗಳೂರು: ಜಯದೇವ ಆಸ್ಪತ್ರೆ (Jayadeva Hospital) ನಿರ್ದೇಶಕ ಡಾ. ಮಂಜುನಾಥ್ ರಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿಕೊಂಡಿದ್ದಾರೆ.
ಈ ಸಂಬಂಧ ಬಗ್ಗೆ ಮಾತನಾಡಿದ ಅವರು, ಜಯದೇವ ನಿರ್ದೇಶಕ ಡಾ. ಮಂಜುನಾಥ್ ಅವರ ಸೇವಾವಧಿ ಇಂದು (ಬುಧವಾರ) ಮುಕ್ತಾಯಗೊಳ್ಳಲಿದೆ. ಈ ವೇಳೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರು ಮಂಜುನಾಥ್ ಅವರ ಬಗ್ಗೆ ಮಾತನಾಡುತ್ತಾ ಇಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ ಎಂದು ಹೆಮ್ಮೆಯಿಂದ ಹೇಳಿದ್ದಾರೆ.
ಜಯದೇವ ಆಸ್ಪತ್ರೆಯ ಸಂಸ್ಥೆಗೆ ಪ್ರಥಮ ಬುನಾದಿ ಹಾಕಿದವರು ಡಾಕ್ಟರ್ ಚೆನ್ನಯ್ಯ, ಅವರಿಗೂ ಡಾ. ಮಂಜುನಾಥ್ ಕಂಡರೆ ತುಂಬಾ ಪ್ರೀತಿ. ನೀವು ಹೊರದೇಶಕ್ಕೆ ಹೋಗಿ ಕೋಟ್ಯಂತರ ರೂಪಾಯಿ ದುಡಿಯಬಹುದು. ಆದರೆ ಇಲ್ಲಿಯ ಜನರ ಕಷ್ಟ ಕೇಳಿದಷ್ಟು ತೃಪ್ತಿ ಸಿಗುವುದಿಲ್ಲ ಎಂದರು. ನಾನು ಮತ್ತು ನನ್ನ ಶ್ರೀಮತಿ 15 ವರ್ಷ ಮಗಳು ಅನುಸೂಯ ಮನೆಯಲ್ಲಿಯೇ ಇದ್ದೆವು. ಅದು ನನ್ನ ಜೀವನದ ಸೌಭಾಗ್ಯ ಅಂತ ಹೇಳುತ್ತೇನೆ. ಇವತ್ತು ಹೆಮ್ಮೆ ಇದೆ.
ನನಗೆ, ಇಡೀ ರಾಷ್ಟ್ರದಲ್ಲಿ ಎರಡು ಸಾವಿರ ಬೆಡ್ ಆಸ್ಪತ್ರೆ ಬಹುಶಃ ಇಲ್ಲ ಅಂತ ನನ್ನ ಭಾವನೆಯಾಗಿದೆ. ಸಚಿವ ಸುಧಾಕರ್ ಬಂದು ಇಲ್ಲಿ ಭಾಗವಹಿಸಿದ್ದು ಸಂತೋಷ. ಈ ಸಂಸ್ಥೆ ಆಗಿನ ದಿನಗಳನ್ನು ನೀವು ಸಹ ನೋಡಿದ್ದೀರಿ ಎಂದು ಹೇಳಿದರು. ನನ್ನ ಮಗ ನನ್ನ ಮಗಳ ಸೌಭಾಗ್ಯ ಅಂತ ಭಾವಿಸುತ್ತೇನೆ. ಮಂಜುನಾಥ್ ಅಂತಹ ಒಬ್ಬ ಶ್ರೇಷ್ಠ ವ್ಯಕ್ತಿ ಕೈ ಹಿಡಿದಿರುವುದು ನನ್ನ ಮಗಳ ಪುಣ್ಯ ಎಂದರು.