ಬೆಂಗಳೂರು : ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಕಾಣಿಸಿಕೊಂಡಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಎಚ್ಎಎಲ್(HAL)ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.