ಕೊಪ್ಪಳ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಗೋವಾ (Goa) ಮತ್ತು ಹುಬ್ಬಳ್ಳಿಯಿಂದ ಬಂದಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರುವ ಡಿಕೆ ಶಿವಕುಮಾರ್ ಅವರ ಆಪ್ತ ವಿಆರ್ ಪಾಟೀಲ್ ಮನೆ ಮೇಲೆ ಇಂದು (ಫೆ.07) ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.
ಉದ್ಯಮಿಯಾಗಿರುವ ವಿ.ಆರ್ ಪಾಟೀಲ್ ಒಡೆತನದ ಖಾಸಗಿ ಶಾಲೆಗೆ ಕಳೆದ ಜನವರಿ 27 ರಂದು ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಬಂದು ಹೋದ ಕೆಲವೇ ದಿನಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.