ಬೆಂಗಳೂರು: ದೀಪಾವಳಿ ಮುಗಿದ ನಂತರ ನವೆಂಬರ್ 15ಕ್ಕೆ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಈಗಾಗಲೇ ಜೆಡಿಎಸ್ , ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇನ್ನು ದೀಪಾವಳಿ ಮುಗಿದ ನಂತರ ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದರು