ಚಿಕ್ಕಮಗಳೂರು : ಮಾನ್ಯ ಇಂಧನ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರು ಇಂದು ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ದಿನಾಚರಣೆ”ಯಲ್ಲಿ ಭಾಗವಹಿಸಿದರು.
ಚಿಕ್ಕಮಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಒಂಭತ್ತು ತಾಲೂಕಿನ ಆಯ್ದ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಸಚಿವರು, ಬಲಿಷ್ಠ ಮತ್ತು ಪ್ರಗತಿಪರ ಸಮಾಜದ ನಿರ್ಮಾಣದಲ್ಲಿ ಮಾಧ್ಯಮಗಳು ಪ್ರಜಾಪ್ರಭುತ್ವದ 4 ನೇ ಸ್ತಂಭವಾಗಿದ್ದು ಅವರ ವೃತ್ತಿ ಈ ನಿಟ್ಟಿನಲ್ಲಿ ಬಹು ಪ್ರಮುಖವಾಗಿದೆ ಎಂದು ಒತ್ತಿ ಹೇಳಿದರು.