State News

ಸಿದ್ದು, ಡಿಕೆಶಿ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್‌ ಅಂತ್ಯವಾಗುತ್ತೆ : ಹೆಚ್‌ಡಿಡಿ

ಬೆಂಗಳೂರು : ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್‌ ಅಂತ್ಯ ಕಾಣಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಂತ್ಯ ಕಾಣಲಿದೆ. 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನಾವು ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ.

ಎನ್‌ಡಿಎ(NDA) ಸೋಲಿಸಿ ರಾಜ್ಯದಲ್ಲಿ 20 ಸೀಟು ಗೆಲ್ಲುತ್ತೇವೆ ಅಹಂನಿಂದ ಹೇಳುತ್ತಿದ್ದಾರೆ. 20 ಸೀಟು ಗೆಲ್ಲೋದು ಎಂದರೆ ಕನಸು ಮಾತ್ರ. ಈ ಬಾರಿ ಪ್ರಧಾನಿ ನರೇಂದ್ರ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಎಲ್ಲರ ನಿರೀಕ್ಷೆ ಮೀರಿ ಜನರು ಎನ್‌ಡಿಎ(NDA) ಮೈತ್ರಿಗೆ ಅಭೂತಪೂರ್ವ ತೀರ್ಪು ಕೊಡುತ್ತಾರೆ. ಎನ್‌ಡಿಎ(NDA) ಮೈತ್ರಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮೇಲೆ ಹಿಂದಿನ ಪ್ರಕರಣ ರೀ ಓಪನ್ ಮಾಡಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಟೀಕಾಪ್ರಹಾರ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!