ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂಧನ ಸಚಿವರಾದ ಕೆಜೆ ಜಾರ್ಜ್ ಮತ್ತು ಮಾನ್ಯ ಕಂದಾಯ ಸಚಿವರಾದಕೃಷ್ಣ ಬೈರೇಗೌಡ ಅವರು ಇಂದು ಮಧ್ಯಾಹ್ನ ಸಭೆ ನಡೆಸಿದ್ದಾರೆ.
ಇಂದು ಮಧ್ಯಾಹ್ನ ನೀರಾವರಿ ಪಂಪ್ ಸೆಟ್ ಗಳ ಸೋಲಾರ್ ಜರಿಜನ್, ಪಿಎಂ ಕುಸುಮ್-ಸಿ ಯೋಜನೆಯ ಅನುಷ್ಠಾನ ಮತ್ತು ಫೀಡರ್ ಸೋಲಾರೈಸೇಶನ್ ಯೋಜನೆಯನ್ನು ಕಾರ್ಯಗತಗೊಳಿಸಲು ವಿದ್ಯುತ್ ಉಪಕೇಂದ್ರಗಳ ಬಳಿಯ ಸರ್ಕಾರಿ ಭೂಮಿಯನ್ನು ಇಂಧನ ಇಲಾಖೆಗೆ ಗುತ್ತಿಗೆ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಭೆಯ ನಂತರ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದಿಂದ 2023-24ನೇ ಸಾಲಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜೇಂದರ್ ಕುಮಾರ್ ಕಟಾರಿಯಾ, ಐಎಎಸ್. ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ . ಮಹಾಂತೇಶ್ ಬೀಳಗಿ, ಕೆಆರ್ ಇಡಿಎಲ್ ಎಂಡಿ ಶ್ರೀ. ರುದ್ರಪ್ಪಯ್ಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.