ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ಹೀಗಿರುವಾಗ ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಿಸಲಿ ಎಂದು ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು