ಮೈಸೂರು: ಕುಮಾರಸ್ವಾಮಿ ಹೊಟ್ಟೆ ಕಿಚ್ಚು, ದ್ವೇಷದಿಂದ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ.ನಮಗೆ ರಾಜಕೀಯದಲ್ಲಿ ದ್ವೇಷ ಗೊತ್ತಿಲ್ಲ. ನಾವು ಯಾರಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪುವುದಿಲ್ಲ. ನಾವೂ ದ್ವೇಷದ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು.ಕುಮಾರಸ್ವಾಮಿ ಇವತ್ತಿನವರೆಗೆ ಯಾವುದಾದರೂ ಸತ್ಯ ಹೇಳಿದ್ರೆ ತೋರಿಸಿ. ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಿದ್ದಾರಾ ಹೇಳಿ ? ಕುಮಾರಸ್ವಾಮಿ ಬರೀ ಹಿಟ್ ಅಂಡ್ ರನ್ ಮಾಡ್ತಾರೆ. ನನ್ನ ಮಗನ ವಿಚಾರದಲ್ಲಿ ನಿನ್ನೆ ಸುಮ್ಮನೆ ಸುಳ್ಳು ಹಬ್ಬಿಸಿದ್ರು.ನನ್ನ ಮಗ ನನಗಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದಾನೆ.ಅವನು ಮಾಜಿ ಶಾಸಕ ಅಲ್ವ.ಆಶ್ರಯ ಸಮಿತಿ ಅಧ್ಯಕ್ಷ ಕೂಡ. ಈಗ ನನ್ನ ಪರವಾಗಿ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತಿದ್ದಾನೆ. ಜನರ ಕೆಲಸ ಮಾಡುವುದು ತಪ್ಪು. ಕೆಡಿಪಿ ಸದಸ್ಯನಾಗಿರುವ ಕಾರಣ ಕೆಲವು ವಿಚಾರಗಳ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾನೆ.ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿದ್ರೆ ಹೇಗೆ ಹೇಳಿ ಎಂದು ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಳೇ ಸರ್ಕಾರದ ಹಗರಣಗಳ ಬಗ್ಗೆ ಅಗತ್ಯವಿದ್ದರೆ ಕುಮಾರಸ್ವಾಮಿ ವಿರುದ್ಧವೂ ತನಿಖೆ ನಡೆಸಲು ಹಿಂದೆ ಬೀಳಲ್ಲ.ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಬಿಟ್ ಕಾಯಿನ್, ಕೋವಿಡ್, ಮೆಡಿಕಲ್ ಕಾಲೇಜು ಮಂಜೂರಾತಿ, ಶೇ.40 ಕಮಿಷನ್ ಬಗ್ಗೆ ತನಿಖೆ ನಡೆಸಲಿ. ಈ ಸಂಬಂಧ ನಾಲ್ಕು ಸಮಿತಿಗಳನ್ನು ರಚಿಸಿ ತನಿಖೆಗೆ ವಹಿಸಿದ್ದೇವೆ.ಕಮಿಟಿಗಳು ಇನ್ನೂ ವರದಿ ಕೊಟ್ಟಿಲ್ಲ. ಕುಮಾರಸ್ವಾಮಿ ಸುಳ್ಳು ಸುಳ್ಳೇ ಆರೋಪ ಮಾಡುತ್ತಾರೆ.
ಅದನ್ನೆಲ್ಲ ತನಿಖೆ ಮಾಡೋಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದರೆ.ಆರೋಪ ಮಾಡಿದವರು ಪುರಾವೆ, ದಾಖಲೆಗಳಿದ್ದರೆ ಕೊಡಬೇಕು. ದಾಖಲೆ ಕೊಟ್ಟರೆ ತನಿಖೆ ಮಾಡುತ್ತೇವೆ ಎಂದರು.