ತುಮಕೂರು: ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
35 ವರ್ಷದ ಗಂಗಾವತಿ ಮೂಲದ ಶಂಕರ್ ಹಾಗೂ 40 ವರ್ಷ ಸತೀಶ್ ಮೃತ ದುರ್ದೈವಿಗಳು . ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಲಾರಿ ತೆರಳುತ್ತಿತ್ತು. ಈ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚ್ಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.