ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಗೆ ಸಿಹಿ ಸುದ್ದಿ ಸಿಕ್ಕಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು.
ಆದರೆ ಶೀಘ್ರದಲ್ಲೇ ಇದನ್ನು ರದ್ದುಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ರು. ಇನ್ನು ಸೆಪ್ಟೆಂಬರ್ 25ಕ್ಕೆ ಬಿಎಂಟಿಸಿ ಪ್ರಾರಂಭವಾಗಿ 25 ವರ್ಷ ಪೂರೈಸಲಿದೆ. ಹೀಗಾಗಿ ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದರು.
ಸೋಮವಾರ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಪರಿಶೀಲಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು ಈ ಆ್ಯಪ್ ಮೂಲಕ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಮತ್ತು ಈ ಆ್ಯಪ್ನಲ್ಲಿ ಪ್ರಯಾಣದ ಟಿಕೆಟ್ ಕೂಡ ಕೊಂಡುಕೊಳ್ಳಬಹುದಾಗಿದೆ ಎಂದರು.
ಈ ಆ್ಯಪ್ ಅನ್ನು ಆ್ಯಪ್ ಅನ್ನು 2022 ರ ಡಿಸೆಂಬರ್ನಲ್ಲಿ ಮತ್ತು ನಂತರ 2023 ರ ಜನವರಿ ಮತ್ತು ಮಾರ್ಚ್ನಲ್ಲಿ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಸರಿಪಡಿಸಿ ಅನಾವರಣಗೊಳಿಸಲು ವಿಳಂಬವಾಯಿತು