ಬೆಂಗಳೂರು : ಶಾಸಕರ ಸಮಸ್ಯೆಗಳನ್ನು ಆಲಿಸಲೆಂದೇ ಶಾಸಕಾಂಗ ಪಕ್ಷದ ಸಭೆ ಕರೆಯುವುದು, ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಶಾಸಕರಿಗೆ ಅನುದಾನ ಸೇರಿದಂತೆ ಎಲ್ಲಾ ವಿಚಾರಗಳನ್ನೂ ಅಲ್ಲೇ ಚರ್ಚಿಸುತ್ತೇವೆ. ಈ ನಿಟ್ಟಿನಲ್ಲಿ ಶಾಸಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಆದರೆ ಯಾವ ಶಾಸಕರದ್ದೂ ಅಸಮಾಧಾನ ಇಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 15ರಿಂದ 20 ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಗುರಿ ಹೊಂದಿದ್ದೇವೆ. ಇದನ್ನು ಸಾಧಿಸುತ್ತೇವೆ ಮುಂಬರುವ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ತೋರುವ ಬಗ್ಗೆ ಚರ್ಚೆ ಮಾಡಿದ್ದೇವೆ. ಕಳೆದ ಬಾರಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಬೆಂಗಳೂರಿಗೆ ಬಂದಾಗಲೇ ಇಲ್ಲಿ ಸಭೆ ನಡೆಯಬೇಕಾಗಿತ್ತು. ಆದರೆ ಕೇರಳ ಮಾಜಿ ಮುಖ್ಯಮಂತ್ರಿಗಳಾದ ಊಮ್ಮನ್ ಚಾಂಡಿ ಅವರ ನಿಧನದಿಂದ ಮುಂದೂಡಲಾಗಿತ್ತು. ಎಐಸಿಸಿಯ ಎಲ್ಲ ಪ್ರಮುಖರ ಜತೆಗೂಡಿ ಸಭೆ ನಡೆಸಬೇಕಿದೆ ಎಂದು ಹೇಳಿದರು.