ರಾಮನಗರ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಸೇರಿದಂತೆ ಸಣ್ಣ ವಾಹನಗಳಿಗೆ ನಿಷೇಧ ಹೇರಲಾಗಿದೆ.
ಈ ಕುರಿತು ಎಕ್ಸ್‌ಪ್ರೆಸ್ ವೇ ಆರಂಭದಲ್ಲಿ ನಾಮಫಲಕ ಅಳವಡಿಕೆ ಮಾಡಲಾಗಿದ್ದು, ವಾಹನ ಸವಾರರ ಗಮನಕ್ಕೆ ಎರಡು ದಿನ ಮೊದಲೇ ನಾಮಫಲಕ ಅಳವಡಿಸಲಾಗಿದ್ದು, ಅ.1 ರಿಂದ ಸರ್ವಿಸ್ ರಸ್ತೆಯಲ್ಲೇ ಸಂಚಾರ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳು ಸೂಚನೆ ನೀಡಿದೆ ಎನ್ನಲಾಗಿದೆ.