ಕಲಬುರಗಿ : ಸೊಲ್ಲಾಪುರದಿಂದ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ಏರ್ಪೋರ್ಟ್ಗೆ ವಾಪಸ್ ಆಗಲಿರುವ ಪ್ರಧಾನಿ ಮೋದಿ ಅವರನ್ನು ಸ್ಥಳೀಯ ಬಿಜೆಪಿ ನಾಯಕರ ಭೇಟಿಗೆ ಅವಕಾಶ ನೀಡಲಾಗಿದೆ.
ಕಲಬುರಗಿ ಭಾಗದ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆ ಸಿದ್ಧತೆ ಸೇರಿ ಹಲವು ವಿಷಯಗಳ ಬಗ್ಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ.