ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ ಗ್ಯಾರಂಟಿ ಯೋಜನೆಯಿಂದ ಆರ್ಥಿಕವಾಗಿ ಹೊಡೆತ ಬಿದ್ದಿದೆ.
ಇದರಿಂದ ತತ್ತರಿಸಿ ಹೋಗಿದ್ದ ಸಿದ್ದರಾಮಯ್ಯ ಸರ್ಕಾರ ಕಾಂಗ್ರೆಸ್ ಸರ್ಕಾರ, ಅಬಕಾರಿ ಇಲಾಖೆ ಮೂಲದಿಂದ ಹೆಚ್ಚಿನ ಆದಾಯ ಗಳಿಸಲು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ಮದ್ಯ ಮರಾಟ ಮಳಿಗೆಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿದೆ ಎನ್ನುವ ಸುದ್ದಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಇಂದು ಚಿತ್ರದುರ್ಗದಲ್ಲಿ ನಗರದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಮದ್ಯದ ಅಂಗಡಿ ತೆಗೆಯಲ್ಲ. ಬಿಜೆಪಿ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.