Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಇಂದು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ..!

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಲಬುರಗಿಗೆ ಆಗಮಿಸಲಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ (PMAY) ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಜಿಲ್ಲೆಗೆ ಆಗಮಿಸಿ ಇಲ್ಲಿಂದ ಹೆಲಿಕಾಫ್ಟರ್ ಮೂಲಕ ತೆರಳಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ ಡ್ರೋನ್ ಕ್ಯಾಮೆರಾಗಳ ಹಾರಾಟ ನಿಷೇಧಿಸಲಾಗಿದೆ.

ಕಲಬುರಗಿ ಏರ್‌ಪೋರ್ಟ್ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಡ್ರೋಣ್ ಕ್ಯಾಮರಾ ಬಳಕೆಯನ್ನು ಜಿಲ್ಲಾಡಳಿತವು ನಿಷೇಧಿಸಿದೆ. CRPC ಸೆಕ್ಷನ್ 144 ಅಡಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯಾರು ಕೂಡ ‌ಡ್ರೋಣ್ ಹಾರಿಸುವಂತಿಲ್ಲ.

ಮೋದಿ ಅವರು ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಇಲ್ಲಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12.10ಕ್ಕೆ ಭಾರತೀಯ ವಾಯುಸೇನೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ಮತ್ತೆ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!