ದಕ್ಷಿಣ ಕನ್ನಡ : ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ತಮಿಳುನಾಡು ಹಾಗೂ ಕೇರಳ ರೀಜನ್‍ನ ಸಮುದ್ರ ಮೇಲ್ಮೈ ಮಟ್ಟಕ್ಕಿಂತ 3.1 ಕಿಲೋಮೀಟರ್ ಸುಳಿಗಾಳಿ ಬೀಸ್ತಾ ಇರೋ ಹಿನ್ನೆಲೆ ಮಳೆಯಾಗುತ್ತೆ. ಅಲ್ಲದೇ ಬೆಂಗಳೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಮಳೆಯಾಗಿದೆ.
ಇಂದು ಮತ್ತು ನಾಳೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ವರುಣ ಅಬ್ಬರಿಸಲಿದ್ದಾನೆ. ಅದಕ್ಕೆ ಈ ಜಿಲ್ಲೆಗಳಲ್ಲಿ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೋಲಾರ, ಚಾಮರಾಜನಗರ, ತುಮಕೂರು, ರಾಮನಗರಲ್ಲೂ ಸಹ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.