ಬಂಟ್ವಾಳ: ನಗರದಲ್ಲಿ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ಗೋಲ್ಮಾಲ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಅಕ್ಕಿ ನಾಪತ್ತೆಯಾಗಿದೆ.
ಸುಮಾರು 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿದ್ದು, ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲಿಸಿದಾಗ ಪತ್ತೆಯಾದ ಗೋಲ್ಮಾಲ್ ಆಗಿರುವುದು ಬೆಳಕಿಗೆ ಬಂದಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ವ್ಯವಸ್ಥಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು ಗೋದಾಮು ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಎಂಬವರಿಂದ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಸಂಬಂಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.