ಬೆಳಗಾವಿ : ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸವದಿಯವರು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಆತ್ಮವಿಶ್ವಾಸದಿಂದ ಹೇಳಿದರು. ನಿಮಗೆ ನೆನಪಿರಬಹುದು, ವಿಧಾನ ಸಭಾ ಚುನಾವಣೆಗೆ ಮೊದಲು ಲಕ್ಷ್ಮಣ ಸವದಿಯವರನ್ನು ಬಿಜೆಪಿಯಿಂದ ಕಾಂಗ್ರೆಸ್ ಗೆ ತರುವಲ್ಲಿ ಲಕ್ಷ್ಮಿ ನಿರ್ಣಾಯಕ ಪಾತ್ರವಹಿಸಿದ್ದರು.
ಬೆಳಗಾವಿ ಭಾಗದಲ್ಲಿ ಮಾಜಿ ಸಚಿವ ಮತ್ತು ಬಿಜೆಪಿಯ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಪ್ರಭಾವ ಕಡಿಮೆ ಮಾಡಲು ಕಾಂಗ್ರೆಸ್ ನಾಯಕರು ಸವದಿಯನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದರು. ಸವದಿಯವರು, ಪಕ್ಷದಲ್ಲೇ ಉಳಿಯುತ್ತಾರೆ, ಅವರನ್ನು ವಾಪಸ್ಸು ಕರೆದೊಯ್ಯಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿರುವುದು ತಮ್ಮ ಗಮನಕ್ಕಂತೂ ಬಂದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.