ಬೆಂಗಳೂರು: ಮೈಸೂರು ಸಂಸ್ಥಾನದಿಂದ ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷ ತುಂಬಿದೆ. ಈ ಹಿನ್ನೆಲೆ ಇಂದು ರಾಜ್ಯಾದ್ಯಂತ 68 ನೇ ಕನ್ನಡ ರಾಜ್ಯೋತ್ಸವ ಆಚರಣೆಯನ್ನ ವಿಜ್ರಂಭಣೆಯಿಂದ ಮಾಡಲಾಯ್ತು. ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
ಇಂದು ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವ.68ನೇ ಕನ್ನಡ ರಾಜ್ಯೋತ್ಸವ ಆಚರಣೆಯನ್ನ ಅದ್ದೂರಿಯಿಂದ ಆಯೋಜನೆ ಮಾಡಲಾಗಿತ್ತು.ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ ಗೌರವ ಸ್ವೀಕರಿಸಿದ್ರು ಸಿಎಂ ಸಿದ್ದರಾಮಯ್ಯ. ಶಾಲಾಮಕ್ಕಳಿಂದ ಕನ್ನಡ ನಾಡಿನ ಸಂಸ್ಕೃತಿ ಸಂಪ್ರದಾಯ ಕಲೆಯನ್ನ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದ್ದು ಎಲ್ಲರ ಗಮನ ಸೆಳೆಯುವಂತೆ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಮಧುಬಂಗಾರಪ್ಪ, ಮಹದೇವಪ್ಪ, ಶಾಸಕರಾದ ಆರ್ ವಿ ದೇಶಪಾಂಡೆ, ರಿಜ್ವಾನ್ ಹರ್ಷದ್, ಹ್ಯಾರೀಸ್ ಸೇರಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭಾಗಿಯಾಗಿದ್ರು.