ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ನಿಷೇಧಾಜ್ಞೆ ಮುಂದುವರಿದಿದೆ.
ರಾಗಿಗುಡ್ಡದಲ್ಲಿ ಅಗತ್ಯ ವಸ್ತುಗಳ ಖರೀದಿಗಷ್ಟೇ ಅವಕಾಶ ನೀಡಲಾಗಿದೆ. ಪೊಲೀಸರು ಹಂತ ಹಂತವಾಗಿ ನಿಷೇಧಾಜ್ಞೆ ಸಡಿಲಿಕೆ ಮಾಡುತ್ತಿದ್ದಾರೆ. ಪ್ರಕರಣ ಸಂಬಂಧ ಈವರೆಗೆ 61 ಜನರ ಬಂಧನ, 24 ಎಫ್ ಐ ಆರ್ ದಾಖಲಾಗಿದೆ.
ಘಟನೆ ಹಿನ್ನೆಲೆ
ಈದ್ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಕಲ್ಲು ತೂರಾಟವಾಗಿದೆ. ಕಳೆದ ವಾರ ಘಟನೆ ಸಂಭವಿಸಿದೆ. ಈ ವೇಳೆ ವಾಹನಗಳು, ಮನೆಗಳು ಪೊಲೀಸರು ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ಹಿನ್ನೆಲೆ ರಾಗಿಗುಡ್ಡದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಯಿತು. ಕಲ್ಲು ತೂರಾಟ ಸಂಬಂಧ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.