ಹೊಸಕೋಟೆ : ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಊಟ ತಿಂದ 8 ಮಕ್ಕಳು ಅಸ್ವಸ್ಥರಾಗಿದ್ದು, ಆ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಳೆದೆರಡು ದಿನಗಳಿಂದ ಪ್ರೌಢಶಾಲೆ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸಿರುವುದು, ಆ ಕೊಳೆತ ಮೊಟ್ಟೆಯನ್ನ ತಿಂದು ಅನಾರೋಗ್ಯಕ್ಕೆ ತುತ್ತಾಗಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಲಾಗಿದ್ದು, ಅಸ್ವಸ್ಥವಾಗಿರೊ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಉಳಿದುಕೊಂಡಿದ್ದಾರೆ.
ನೆನ್ನೆ ಮಧ್ಯಾಹ್ನ ಊಟ ಮಾಡಿದ ನಂತರ ವಸತಿ ನಿಲಯದಲ್ಲಿದ್ದ ಕೆಲ ವಿದ್ಯಾರ್ಥಿಗಳಿಗೆ ವಾಂತಿ ಹೊಟ್ಟೆ ನೊವ್ವು, ತಕ್ಷಣ ವಸತಿ ನಿಲಯದ ವಾರ್ಡ್ ನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕಿತ್ಸೆ ಪಡೆದು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ.