ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ದುಗ್ಲಾಪುರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಜಿತೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಎಸ್ಪಿ ವಿಕ್ರಮ್ ಅಮಟೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪೊಲೀಸರು ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದುಗ್ಲಾಪುರದಲ್ಲಿ ಬಸ್ ಅಪಘಾತ ಸಂಭವಿಸಿದೆ. ಇದರ ಪರಿಣಾಮವಾಗಿ ಓರ್ವ ವಿಧ್ಯಾರ್ಥಿನಿ ಸಾವು, ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.