ಧಾರವಾಡ: ಹಿರಿಯ ವೀರಶೈವ ಮಹಾಸಭಾಧ್ಯಕ್ಷರು ರಾಜ್ಯ ಸರ್ಕಾರದಲ್ಲಿ ಲಿಂಗಾಯುತರಿಗೆ ಅನ್ಯಾಯವಾಗುತ್ತಿದೆ ಎಂಬ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಹೌದು ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಯೋಚನೆ ಮಾಡಬೇಕು ಎಂದು ಹೇಳಿದ್ದಾರೆ. ಅವರು ಇದುವರೆಗೂ ಪ್ರಸ್ತಾವನೆ ಸಲ್ಲಿಸಿಲ್ಲ. ಕಾವೇರಿ, ಬರ ವಿಷಯಕ್ಕೆ ಸ್ಪಂದಿಸಲು ಕೇಂದ್ರ ಸರ್ಕಾರ ತಯಾರಿದೆ ಎಂದರು. ಕೆಲವು ತಾಲೂಕುಗಳು ಬರದಿಂದ ಉಳಿದಿವೆ. ಅದನ್ನು ಮೊದಲು ರಾಜ್ಯ ಸರ್ಕಾರ ಘೋಷಣೆ ಮಾಡಲಿ.
ಅಧ್ಯಯನ ತಂಡ ತಡವಾಗಿ ಬಂದ ವಿಚಾರವಾಗಿ ಮಾತನಾಡಿದ ಜೋಶಿ, ರಾಜ್ಯದಿಂದ ಪ್ರಸ್ತಾಪ ಬಂದ ಬಳಿಕವೇ ಕೇಂದ್ರ ತಂಡ ಬರಬೇಕಾಗುತ್ತದೆ. ಅವರಿಂದ ಪ್ರಸ್ತಾಪ ಬಂದ ಬಳಿಕ ತಂಡ ಬಂದಿದೆ. ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರದತ್ತ ಕೈ ತೋರಿಸಬಾರದು ಎಂದರು.