ಬೆಂಗಳೂರು: ಆ್ಯಂಬ್ಯುಲೆನ್ಸ್ ಸೇವೆಯಲ್ಲಿ ಸಾಕಷ್ಟು ಕುಂದು ಕೊರತೆ ಇವೆ. ಗುಣಮಟ್ಟದ ವೃದ್ಧಿಯಲ್ಲಿ ಆರೋಗ್ಯ ಕವಚ ಸೇವೆ ಕುಂಠಿತವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಗುಣಮಟ್ಟದ ವೃದ್ಧಿಯಲ್ಲಿ ಆರೋಗ್ಯ ಕವಚ ಸೇವೆ ಕುಂಠಿತವಾಗಿದೆ. ಈ ಸೇವೆಯಲ್ಲಿ ಸಾಕಷ್ಟು ಕುಂದುಕೊರತೆಗಳಿವೆ.ಲೋಪದೋಷಗಳನ್ನು ಸರಿಪಡಿಸಲು ಮುಂದಾಗಿದ್ದೇವೆ.ಹಳೆಯ ಆ್ಯಂಬ್ಯುಲೆನ್ಸ್ ವಾಹನಗಳಿಗೆ ಮುಕ್ತಿ ಕೊಟ್ಟು ಇಂದು 262 ಹೊಸ ವಾಹನಗಳಿಗೆ ಚಾಲನೆ ನೀಡಿದ್ದೇವೆ.ನೂತನ 262 ಆ್ಯಂಬ್ಯುಲೆನ್ಸ್ ಗಳ ಲೋಕಾರ್ಪಣೆ ನಡೆಸಿದ್ದಾರೆ.
ವಿಧಾನಸೌಧದ ಗ್ರೌಂಡ್ ಸ್ಟೆಪ್ ಬಳಿ ಕಾರ್ಯಕ್ರಮ ನಡೆಯುತ್ತಿದ್ದಾರೆ.108 ಆರೋಗ್ಯ ಕವಚ ತುರ್ತು ಆ್ಯಂಬ್ಯುಲೆನ್ಸ್ ಸೇವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ನಡೆಸಿದ್ದಾರೆ.ಶಾಸಕ ರಿಜ್ವಾನ್ ಹರ್ಷದ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದಾರೆ.