ಬೆಂಗಳೂರು: ಶಿವಮೊಗ್ಗದಲ್ಲಿ ಗಲಭೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರದಲ್ಲಿ ಹಿಂದೂಗಳಿಗೆ ಯಾವುದೇ ಸುರಕ್ಷಿತವಿಲ್ಲ ಅನ್ನೋದು ಖಚಿತವಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗಕ್ಕೆ ಬಿಜೆಪಿ ನಾಯಕರ ಸತ್ಯ ಶೋಧನ ಸಮಿತಿ ಭೇಟಿ ನೀಡಿದ್ದರು.
ನಾವು ಪಾಠ ಕಲಿಸಿದ ಮಕ್ಕಳು ಶಿಕ್ಷಕರಾದ ನಮ್ಮ ಮನೆಗೆ ಕಲ್ಲಿನಿಂದ ಹೊಡೆಯುವ ದುರಂತ ನೋಡಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಊರು ಬಿಟ್ಟು ಹೋಗೋ ಸ್ಥಿತಿ ನಿರ್ಮಾಣ ಆಗಿತ್ತು. ಈಗ ಅದೇ ನೋವನ್ನ ರಾಗಿಗುಡ್ಡದಲ್ಲಿ ಇರುವ ಹಿಂದೂಗಳು ಅನುಭವಿಸುತ್ತಿದ್ದಾರೆ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.