ಬೆಂಗಳೂರು: ಇಂದು ಯಲಂಕದಲ್ಲಿರುವ ಸಂಯೋಜಿತ ಅನಿಲ ವಿದ್ಯುತ್ ಸ್ಥಾವರಕ್ಕೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಭೇಟಿ ನೀಡಿದರು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇಂಧನ ಸಚಿವಾಲಯ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ತಾಂತ್ರಿಕ ನಿರ್ದೇಶಕ ನರೇಂದ್ರ ಕುಮಾರ್ ಮತ್ತಿತರ ಅಧಿಕಾರಿಗಳು ಪರಶೀಲನೆಯಲ್ಲಿ ಪಾಲ್ಗೊಂಡಿದ್ದರು. ಪರಶೀಲನೆಯ ಸಂದರ್ಭದಲ್ಲಿ ಸಚಿವರು ಸಂಸ್ಥೆಯ ಕಾರ್ಯವೈಖರಿ ಮತ್ತು ದಕ್ಷತೆಯನ್ನು ಸುಧಾರಿಸುವ ಮಾರ್ಗಗಳ ಬಗ್ಗೆ ಕುರಿತು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.