ಬಾಗಲಕೋಟೆ ( BAGALKOTE ) ಜಿಲ್ಲೆಯ HSK ಆಸ್ಪತ್ರೆ ವೈದ್ಯರು ವ್ಯಕ್ತಿ ಹೊಟ್ಟೆಯಲ್ಲಿದ್ದ 187 ಕಾಯಿನ್ ಗಳನ್ನು ಹೊರತೆಗೆದು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. 187 ನಾಣ್ಯಗಳನ್ನು ಎಂಡೋಸ್ಕೋಪಿ ಮೂಲಕ ಹೊರತೆಗೆದಿದ್ದಾರೆ. ವೈದ್ಯರ ಶಸ್ತ್ರಚಿಕಿತ್ಸೆಗೆ ಪ್ರಶಂಸೆ ವ್ಯಕ್ತವಾಗಿದೆ.
ರಾಯಚೂರು ( RAICHURU ) ಜಿಲ್ಲೆ ಲಿಗಸುಗೂರು ತಾಲೂಕಿನ ಸಂತೆಕೆಲ್ಲೂರು ಗ್ರಾಮದ ದ್ಯಾಮಪ್ಪ ಹರಿಜನ ಎಂಬ 58 ವರ್ಷದ ವೃದ್ಧ ನಾಣ್ಯ ನುಂಗಿದ್ದರು. ಸದ್ಯ HSK ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ 5 ರೂಪಾಯಿಯ 56 ನಾಣ್ಯ, 2 ರೂಪಾಯಿಯ 51 ನಾಣ್ಯ ಹಾಗೂ 1 ರ 80 ನಾಣ್ಯಗಳು ಸೇರಿ ಒಟ್ಟು 187 ನಾಣ್ಯಗಳನ್ನು ಹೊರ ತೆಗೆದಿದ್ದಾರೆ. ಡಾ ಈಶ್ವರ ಕಲಬುರ್ಗಿ ಅವರು ಈ ಚಿಕಿತ್ಸೆ ಯಶಸ್ವಿಗೊಳಿಸಿದ್ದಾರೆ. ನಿನ್ನೆ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ವೃದ್ದ ದಾಖಲಾಗಿದ್ದರು. ಎಕ್ಸರೇಯಲ್ಲಿ ನಾಣ್ಯಗಳು ಪತ್ತೆಯಾಗಿದ್ದವು. ವ್ಯಕ್ತಿ ಜೀವ ಅಪಾಯದಲ್ಲಿರುವುದನ್ನು ಅರಿತ ವೈದ್ಯರು ಎಂಡೋಸ್ಕೋಪಿ ಮಾಡಿ ನಾಣ್ಯಗಳನ್ನು ಹೊರತೆಗೆದಿದ್ದಾರೆ.
ಇದನ್ನೂ ಓದಿ : – DO OR DIE ಪಂದ್ಯದಲ್ಲಿ ಮಿಂಚಿದ MESSI – ನಾಕೌಟ್ ರೇಸ್ ನಲ್ಲಿ ಉಳಿದುಕೊಂಡ ಅರ್ಜೆಂಟೀನಾ