ಜೂನ್ 13ಕ್ಕೆ ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಪ್ರಾಮಾಣಿಕವಾಗಿ ಚುನಾವಣೆ ಮಾಡುತ್ತಿದ್ದೇವೆ. ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಯ. ಚುನಾವಣೆ ಅಂದ ಮೇಲೆ ಸಣ್ಣಪುಟ್ಟ ಅಸಮಾಧಾನ ಸಹಜ. ಹಣುಮಂತ ನಿರಾಣಿ, ಶಹಾಪುರಗೆ 33 ವಿಧಾನಸಭೆ ವ್ಯಾಪ್ತಿ ಬರಲಿದೆ. ಲಖನ್ ಜಾರಕಿಹೊಳಿ ಬೆಂಬಲ ಬಗ್ಗೆ ಸಾರ್ವಜನಿಕ ಚರ್ಚೆ ಬೇಡ. ಸಿಎಂ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ಬಹಿರಂಗ ಚರ್ಚೆ ಬೇಡ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ರು.
ಇದನ್ನೂ ಓದಿ :- ಒಂದು ವಾರದ ವರೆಗೂ ನಾನು ಯಾರನ್ನು ಭೇಟಿ ಮಾಡುವುದಿಲ್ಲ – ಕುಮಾರಸ್ವಾಮಿ