PSI ಪರೀಕ್ಷಾ ನೇಮಕಾತಿ ಹಗರಣ ಸಂಬಂಧ ಎಡಿಜಿಪಿ ಅಮೃತ್ ಪಾಲ್ ( amruth pual ) ವಿರುದ್ಧ ಸಿಐಡಿ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಪರೀಕ್ಷಾ ನೇಮಕಾತಿ ಜಾಲದಲ್ಲಿ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ಇಂದು ನ್ಯಾಯಾಲಯಕ್ಕೆ ಅಮೃತ್ ಪಾಲ್ ವಿರುದ್ಧ 1406 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದರು.
ಈ ಮುನ್ನ ಸಿಐಡಿ ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಪ್ರಮುಖ ಆರೋಪಿಯಾಗಿರುವ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪಾಲ್ ಹೆಸರು ಉಲ್ಲೇಖಿಸಲಿರಲಿಲ್ಲ. ಹೈ ಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ. ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಪಾಲ್ ವಿರುದ್ಧ 78 ದಾಖಲೆಗಳು, 38 ಸಾಕ್ಷಿಗಳು ಒಳಗೊಂಡ 1406 ಪುಟಗಳ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ನೇಮಕಾತಿ ಜಾಲದಲ್ಲಿ ಪಾಲ್ ಕೈವಾಡ, ಅಕ್ರಮ ಎಸಗಲು ಯಾರ ರೀತಿ ಸಂಚು ರೂಪಿಸಿದ್ದರು ? ಆಭ್ಯರ್ಥಿಗಳಿಂದ ಪಡೆದ ಹಣ ಸೇರಿದಂತೆ ಹಲವು ಅಂಶಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: – ನಿಮಗೆ ತಾಕತ್ತು ದಮ್ಮು ಇದ್ದರೆ ನಿಮ್ಮ ಪಕ್ಷದ ಶಾಸಕರನ್ನು ನಿಮ್ಮ ಪಕ್ಷದಲ್ಲಿ ಇಟ್ಟುಕೊಳ್ಳಿ – ಲಕ್ಷಣ್ ಸವದಿ