ರಸ್ತೆ (Road) ಯಲ್ಲಿ ಬಿದ್ದಿದ್ದ ಗುಂಡಿಯಿಂದ ಸರಣಿ ಅಪಘಾತವಾಗಿರುವ ಘಟನೆ ಬೆಂಗಳೂರಿ (Bengaluru) ನ ಯಲಹಂಕ (Yelahanka) ದ ಅಟ್ಟೂರು ಬಡಾವಣೆಯಲ್ಲಿ ನಡೆದಿದೆ. ಗುಂಡಿ ತಪ್ಪಿಸಲು ಹೋಗಿ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಕಾರಣ ಮುಂದೆ ಬರ್ತಿದ್ದ ಬೈಕ್ ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ. ಓರ್ವ ಯುವಕ ಸಾವನ್ನಪ್ಪಿದರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಹಳ್ಳಗಳ ರಸ್ತೆಯಿಂದ ಪದೇ ಪದೇ ಅಪಘಾತವಾಗ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಾರು ಪಲ್ಟಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ : – ಪತ್ನಿ ಹಲ್ಲೆ ನಡೆಸಿದ್ದಾಳೆಂದು ಟ್ವಿಟ್ಟರ್ ನಲ್ಲಿ ದೂರು ನೀಡಿದ ಪತಿ