ಹೈ ಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ( CET ) ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ತಿಳಿಸಿದ್ದಾರೆ. ಅಕ್ಟೋಬರ್ 3 ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.
ಪುನಾರಾವರ್ತಿತರ 2021ನೇ ಸಾಲಿನ ಪಿಯು ಅಂಕಗಳನ್ನು 2022ನೇ ಸಾಲಿನ ಸಿಇಟಿಗೆ ಪರಿಗಣಿಸುವ ವಿಚಾರದಲ್ಲಿ ಸಮಸ್ಯೆ ಉದ್ಭವಿಸಿತ್ತು. ಈ ಕುರಿತು ಸಿಇಟಿ ರಾಂಕಿಂಗ್ ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂದು ಜುಲೈ 30ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್ ( high court ) ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನು ಪರಿಗಣಿಸುವಂತೆ ಆದೇಶ ನೀಡಿತ್ತು.
ಇದನ್ನೂ ಇದಿ : – ಫ್ರೀಡಂ ಕಮ್ಯುನಿಟಿ ಹಾಲ್ ಸೀಜ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ