ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದಿರುವ ಭೂ ಒತ್ತುವರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಒತ್ತುವರಿದಾರರ ವಿರುದ್ಧ ದಾಳಿ ಮುಂದುವರಿಸಿದ್ದು, ಜೆ.ಪಿ.ನಗರ ( J.P NAGARA ) ದಲ್ಲಿ 30 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಜೆ.ಪಿ.ನಗರ 9ನೇ ಹಂತ, 1ನೇ ಬ್ಲಾಕ್ ನ ಆಲಹಳ್ಳಿಯಲ್ಲಿ ಸರ್ವೆ ನಂಬರ್ 4/1ರಲ್ಲಿ 22 ಗುಂಟೆ ಜಾಗವನ್ನು ಬಿಡಿಎ ಮತ್ತೆ ತನ್ನ ವಶಕ್ಕೆ ತೆಗೆದುಕೊಂಡಿದೆ. ಈ ಜಾಗದಲ್ಲಿ ಕಳೆದ 10 ವರ್ಷಗಳಿಂದ ತಾತ್ಕಾಲಿಕ್ ಶೆಡ್ ಗಳನ್ನು ನಿರ್ಮಿಸಿಕೊಂಡು ಹಲವರು ವ್ಯಾಪಾರ ಮಾಡುತ್ತಿದ್ದರು. ಪೊಲೀಸ್ ಬಂದೋಬಸ್ತ್ ನಲ್ಲಿ 6 ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಲಾಯಿತು. ಇಂಥ ಶೆಡ್ ಗಳಲ್ಲಿ ಇರುವವರು ನಿರಾಪೇಕ್ಷಣಾ ಪತ್ರ ನೀಡಬೇಕು. ನಕಲಿ ಎನ್ಒಸಿ ಕೊಟ್ಟರೆ, ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬಿಡಿಎ ಎಚ್ಚರಿಸಿದೆ. ಇದನ್ನೂ ಓದಿ : – ಮಂಗಳೂರು ಸ್ಫೋಟ ಪ್ರಕರಣ – NIA ಗೆ ವಹಿಸುವ ಬಗ್ಗೆ ಸರ್ಕಾರ ನಿರ್ಧರಿಸಿಲ್ಲ- ಸಿಎಂ ಬೊಮ್ಮಾಯಿ

ಬಿಡಿಎ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ
ನಿಯಮ ಉಲ್ಲಂಘನೆಯಲ್ಲಿ ಶಾಮೀಲಾಗಿರುವವರು ಹಾಗೂ ಅಕ್ರಮ ಎಸಗಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( BASAVARAJ BOMMAI ) ಸೂಚಿಸಿದ್ದಾರೆ. ಡಾ ಶಿವರಾಮ ಕಾರಂತ ಬಡಾವಣೆ ಅಧಿಸೂಚನೆ ಪ್ರಕರಣದ ಬಗ್ಗೆ ಇದೀಗ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಬಡಾವಣೆಗಾಗಿ ಕಟ್ಟಡಗಳು ಇರುವ ಪ್ರದೇಶವನ್ನೂ ಒಳಗೊಳ್ಳುವಂತೆ ಭೂಸ್ವಾಧೀನ ಅಧಿಸೂಚನೆ ಹೊರಡಿಸಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಸಿಎಂ ಸೂಚಿಸಿದ್ದಾರೆ.

ಇದನ್ನೂ ಓದಿ : –  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಸ್ಪರ್ಧೆ – ಕೆಪಿಸಿಸಿಗೆ ಅರ್ಜಿ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!