ಸಿದ್ರಾಮುಲ್ಲಾ ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ

ಸಿದ್ದರಾಮಯ್ಯ ಅವರನ್ನ ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಸಿ.ಟಿ.ರವಿ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ ಎಂದು ಸರಣಿ ಟ್ವೀಟ್ ಗಳ ಮೂಲಕ ಸಿದ್ದು ವಿರುದ್ಧ ಬಿಜೆಪಿ ಕಿಡಿಕಾರಿದೆ.

ಸಿದ್ದರಾಮಯ್ಯ ( SIDDARAMAIAH )  ಅವರನ್ನ ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಸಿ.ಟಿ.ರವಿ ( C.T RAVI ) ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ ಎಂದು ಸರಣಿ ಟ್ವೀಟ್ ಗಳ ಮೂಲಕ ಸಿದ್ದು ವಿರುದ್ಧ ಬಿಜೆಪಿ ಕಿಡಿಕಾರಿದೆ.

ಕನ್ನಡಿಗರು @siddaramaiah ರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?

ತಮ್ಮವರನ್ನೇ ತುಳಿಯುವ @siddaramaiah ರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ @INCKarnataka ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು & ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.

ಕ್ಷಣವೂ ವಿವೇಚಿಸದೆ ತಲಾಖ್ ಎಂದು ಮಹಿಳೆಯರ ಬದುಕು ಬರ್ಬಾದ್ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು @siddaramaiah ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್ ಎನ್ನದೆ ಮತ್ತೇನೆಂದು ಕರೆದಾರು?

ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ @siddaramaiah ಗೆ ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.

 

ಟಿಪ್ಪು Express ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’Express ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ @siddaramaiah ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?   ಇದನ್ನೂ ಓದಿ : –  ಪತಿಗೆ ಜಮೀನು ಒತ್ತುವರಿಯಲ್ಲಿ ಸಹಾಯ ಮಾಡಿದ ಆರೋಪ – ರೋಹಿಣಿ ಸಿಂಧೂರಿಗೆ ಸಂಕಷ್ಟ

 

ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದನ್ನು ಒಪ್ಪದ @siddaramaiah, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್ ಬ್ರಾಂಡ್ ಮಾಡಿರುವುದು.

26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ @siddaramaiah, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ?

ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ @siddaramaiah. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಕಿಡಿಕಾರಿದೆ.

ಇದನ್ನೂ ಓದಿ : –  ಅಂಜನಾದ್ರಿ ಬೆಟ್ಟದಲ್ಲಿಯೂ ಅಪ್ಪು ಕಲರವ

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!