ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್ – ಡಿ.ಕೆ ಶಿವಕುಮಾರ್

ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( SIDDARAMAIAH ) ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗೆ ಅಂತ್ಯ ಹಾಡಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( SIDDARAMAIAH ) ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗೆ ಅಂತ್ಯ ಹಾಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಅರ್ಜಿ ಆಹ್ವಾನ, ದೇಣಿಗೆ ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ, ಈ ಬಾರಿ ಹೆಚ್ಚು ಸದ್ದು ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದರು. ಟಿಕೆಟ್‌ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದು ಹೇಳಿದರು. ಇದನ್ನೂ ಓದಿ : –  ನನಗೆ ಏನು ಗೊತ್ತು ನಿಮ್ಮತ್ರನೇ ಉತ್ತರ ಇದೆ ನಿಮ್ಮತ್ರನೇ ಪ್ರಶ್ನೆ ಇದೆ – ಡಿ.ಕೆ ಶಿವಕುಮಾರ್

ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದವರ ಹಿನ್ನೆಲೆ ಏನು..? ಪಕ್ಷಕ್ಕೆ ಅವರು ಯಾವ ರೀತಿಯಾದಂತಹ ಕೆಲಸ ಮಾಡಿದ್ದಾರೆ? ಇನ್ನು ಮುಂದೆ ಕೆಲಸ ಮಾಡಲು ಏನು ಯೋಜನೆಯನ್ನು ತಯಾರಿ ಮಾಡಿಕೊಂಡಿದ್ದಾರೆ? ಎಂಬ ಬಗ್ಗೆ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅಭ್ಯರ್ಥಿ ಆಕಾಂಕ್ಷಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದರು. ಬಿಜೆಪಿಯವರು ಮತಪಟ್ಟಿಯಲ್ಲಿ ಮತದಾರರ ಹೆಸರನ್ನು ಕಿತ್ತಾಕಬೇಕು ಅಂತ ಏನೆಲ್ಲಾ ಮಾಡ್ತಿದ್ದಾರೆ ಅಂತ ನಿಮಗೆ ಗೊತ್ತಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ವರದಿಗಳು ಬಂದಿವೆ. ಈ ನಿಟ್ಟಿನಲ್ಲಿ ನಾವು ನಮ್ಮ ಜನಗಳಿಗೆ ಮುಂಜಾಗ್ರತೆಯನ್ನು ವಹಿಸಬೇಕು ಎಂದು ಮನವಿ ಮಾಡುತ್ತೇವೆ ಎಂದರು‌. ರಾಜ್ಯದಲ್ಲಿ ದೊಡ್ಡ ರೀತಿಯಲ್ಲಿ ಅಧಿಕಾರ ದುರುಪಯೋಗವಾಗುತ್ತಿದೆ. ಈ ಕಾರಣಕ್ಕಾಗಿ ನಾವು ಹುಷಾರಾಗಿರಬೇಕು. ಅದಕ್ಕೆ ನಮ್ಮ ಎಲ್ಲಾ ಅಭ್ಯರ್ಥಿಗಳಿಗಾಗಿ ಇವತ್ತು ರಾಹುಲ್ ಗಾಂಧಿ ( RAHUL HANDHI ) ಯವರು ಇಡೀ ದೇಶದಾದ್ಯಂತ ನಡೆಯುತ್ತಿದ್ದಾರೆ. ಅಭ್ಯರ್ಥಿಗಳು ಸಹ ಈ ಭಾರತ್ ಜೋಡೋ ಅನ್ನು ಹಳ್ಳಿಗಳಿಗೂ ತೆಗೆದುಕೊಂಡು ಹೋಗಬೇಕು. ಇಂತಹ ಎಲ್ಲ ವಿಚಾರಗಳ ಬಗ್ಗೆ ಸೂಚನೆ ಕೊಡುವುದಕ್ಕೆ ಅವರನ್ನು ಸಭೆಗೆ ಆಹ್ವಾನಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ : –  ತಾರಕಕ್ಕೇರಿದ ಗಡಿ ವಿವಾದ – ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!