2021-22ನೇ ಸಾಲಿನ ಎಸ್ ಎಸ್ ಎಲ್ ಸಿ(SSLC results) ಪರೀಕ್ಷೆ ಪ್ರಕಟಗೊಂಡಿದೆ, ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ (BC Nagesh) ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.85.63 ರಷ್ಟು ಫಲಿತಾಂಶ ಬಂದಿದೆ..ವಾಡಿಕೆಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ, ಶೇಕಡಾ 90.29ರಷ್ಟು ಹೆಣ್ಣುಮಕ್ಕಳು ಉತ್ತೀರ್ಣರಾಗಿದ್ದಾರೆ.8,20,900 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ನಗರಕ್ಕಿಂತ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.
ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.625ಕ್ಕೆ 625 ಅಂಕಗಳನ್ನು 125 ಮಕ್ಕಳು ಗಳಿಸಿದ್ದಾರೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಫಲಿತಾಂಶ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪೂರಕ ಪರೀಕ್ಷೆ – ಜೂನ್ 27 ರಿಂದ ಜುಲೈ 4 ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಮೇ 30ರವರೆಗೆ ಅವಕಾಶವಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನಾಂಕವಾಗಿದೆ. ಇದನ್ನೂ ಓದಿ : – ಕೊರೊನಾ ಬಳಿಕ ಭಾರತಕ್ಕೆ ಮಂಕಿಪಾಕ್ಸ್ ಭೀತಿ…!