ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ನಂದಿನಿ ಹಾಲು ( NANDINI MILK )ಮತ್ತು ಮೊಸರಿನ ದರ 3 ರೂ. ಏರಿಕೆಯಾಗಿದೆ. ಸದ್ಯ ರೈತರಿಂದ ಪ್ರತಿ ಲೀಟರ್ ಹಾಲನ್ನು KMF ಸರಾಸರಿ 29 ರೂ.ಗೆ ಖರೀದಿ ಮಾಡುತ್ತಿತ್ತು.
ಅಷ್ಟೇ ಅಲ್ಲದೇ ಸರ್ಕಾರದಿಂದ ಪ್ರತಿ ಲೀಟರ್ ಗೆ 5 ರೂ ಸಹಾಯಧನ ಕೂಡ ರೈತರಿಗೆ ನೀಡಲಾಗುತ್ತಿದೆ. ಈಗ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಪ್ಲಾನ್ ಮಾಡಲಾಗಿದೆ. ಇದನ್ನೂ ಓದಿ : – ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ…!
ಹವಾಮಾನ ವೈಪರೀತ್ಯ ಕಾರಣದಿಂದ ಮೇವು ಸಿಗುತ್ತಿಲ್ಲ. ಮೇವಿನ ಬೆಲೆ ಭಾರೀ ಏರಿಕೆಯಾಗಿದೆ. ಇದರ ಜೊತೆ ಹಸುವಿಗೆ ಚರ್ಮ ಗಂಟು ರೋಗ ಬಾಧಿಸುತ್ತಿದೆ. ಅಷ್ಟೇ ಅಲ್ಲದೇ ಸಾಗಾಣಿಕೆ , ವಿದ್ಯುತ್ , ಪ್ಯಾಕಿಂಗ್ ಇತ್ಯಾದಿ ವೆಚ್ಚ ಶೇ.25 – 35 ರಷ್ಟು ಹೆಚ್ಚಾಳವಾಗಿದೆ. ಈ ಕಾರಣಕ್ಕೆ ಹಾಲು ಮತ್ತು ಮೊಸರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ.
ಇದನ್ನೂ ಓದಿ : – ವಿವೇಕ ಯೋಜನೆಗೆ ಚಾಲನೆ – ಶಿಕ್ಷಣದಲ್ಲಿ ರಾಜಕಾರಣ ಬೇಡ ಎಂದ ಸಿಎಂ ಬೊಮ್ಮಾಯಿ