ನಾನು ಬಳಸಿದ ಪದ ಸ್ವತಃ ನನಗೂ ನೋವುಂಟು ಮಾಡಿದೆ – ಹೆಚ್.ಡಿ ಕುಮಾರಸ್ವಾಮಿ

ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿರುವ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ.

ರಮೇಶ್ ಕುಮಾರ್ ( RAMESH KUMAR ) ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ( H.D KUAMRSWAMY ) ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಪದ ಬಳಕೆ ಬಾಯ್ ತಪ್ಪಿ ಬಂದಿರಬಹುದು. ಅದಕ್ಕೆ ಕಾರಣ ಅಲ್ಲಿನ ಮಕ್ಕಳ ಆಕ್ರೋಶ, ಕಣ್ಣೀರು ಕಾರಣ ಎಂದು ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿರುವ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ.  ಇದನ್ನೂ ಓದಿ : – ನಾನು ಎಲ್ಲಿ ಸ್ವರ್ಧೆ ಮಾಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ತೀರ್ಮಾನ – ನಿಖಿಲ್ ಕುಮಾರಸ್ವಾಮಿ

ನಿನ್ನೆಯ ದಿನ ಶ್ರೀನಿವಾಸಪುರ ( SRINIVASPURA ) ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು.

ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ರು.

 ಇದನ್ನೂ ಓದಿ : – ರಮೇಶ್ ಕುಮಾರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹೆಚ್ಡಿಕೆ – ವಿಡಿಯೋ ವೈರಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!