ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (Lohitashwa) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (Lohitashwa) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಚಂದನವನದಲ್ಲಿ ಲೋಹಿತಾಶ್ವ ಅವರು ಹಲವು ವರ್ಷಗಳ ಅನುಭವ ಹೊಂದಿದ್ದರು. ಡಾ. ರಾಜ್ ಕುಮಾರ್, ಅಂಬರೀಷ್, ವಿಷ್ಣುವರ್ಧನ್, ಶಂಕರ್ ನಾಗ್ ಮುಂತಾದವರ ಜೊತೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಅವರ ನಿಧನದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಲೋಹಿತಾಶ್ವ ಅವರಿಗೆ 80 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಇನ್ಫೆಕ್ಷನ್ ಆಗಿತ್ತು. ಹಾಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದನ್ನೂ ಓದಿ : – ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಅನಗತ್ಯ ವಿವಾದ ಮಾಡಬಾರದು- ಬಿ.ಕೆ.ಹರಿಪ್ರಸಾದ್

ಇನ್ನೇನು ಗುಣಮುಖರಾಗುತ್ತಾರೆ ಎಂದುಕೊಳ್ಳುತ್ತಿರುವಾಗಲೇ ಅವರಿಗೆ ಹೃದಯಾಘಾತ ಸಂಭವಿಸಿದೆ. ನಂತರ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಸುಮಾರು ಒಂದು ತಿಂಗಳ ಕಾಲ ಅವರಿಗೆ ಚಿಕಿತ್ಸೆ ನೀಡಲಾಯಿತು. ಆದರೆ ಇಂದು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದಿದ್ದಾರೆ. ರಾತ್ರಿ 11 ಗಂಟೆವರೆಗೂ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ನಾಳೆ ಅವರ ಹುಟ್ಟೂರಾದ ತುಮಕೂರು ಬಳಿಯ ತೊಂಡಗೇರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ : – ಮಾಸ್ಟರ್ ಶೆಫ್ ಆಗಿ ತೆರೆ ಮೇಲೆ ಬರಲಿದ್ದಾರೆ ಸ್ವೀಟಿ ಅನುಷ್ಕಾ ಶೆಟ್ಟಿ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!