ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ? ಸಿಎಂ ಬೊಮ್ಮಾಯಿಗೆ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ( bjp) ಆಡಳಿತದಲ್ಲಿ ಮಹಿಳೆಯರಿಗೆ ಗೌರವ ಏಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( basavaraj bommai ) ಅವರಿಗೆ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ( bjp ) ಆಡಳಿತದಲ್ಲಿ ಮಹಿಳೆಯರಿಗೆ ಗೌರವ ಏಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( basavaraj bommai ) ಅವರಿಗೆ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.

ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ. ಶಾಸಕ ಅರವಿಂದ್ ಬೆಲ್ಲದ್ ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನು ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬೊಮ್ಮಾಯಿ ಅವರೇ? ಇದರ ವಿರುದ್ದ ನಿಮ್ಮ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.

ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್ನೋಟ್ನಲ್ಲಿ ಸ್ಪಷ್ಟವಾಗಿದೆ, ಬಸವರಾಜ್ ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ : –  ಮನ್ ಕಿ ಬಾತ್ ನಲ್ಲಿ ಬೆಂಗಳೂರಿನ ಸುರೇಶ್ ಕುಮಾರ್ ರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಶಾಸಕ ಅರವಿಂದ್ ಲಿಂಬಾವಳಿ ( arvind limabavali ) ಯಿಂದ ಮಹಿಳೆಗೆ ನಿಂದನೆ, ಸಚಿವ ವಿ.ಸೋಮಣ್ಣರಿಂದ ಮಹಿಳೆಯ ಮೇಲೆ ಹಲ್ಲೆ, ಶಾಸಕ ಅರವಿಂದ್ ಬೆಲ್ಲದ್ರಿಂದ ಮಹಿಳೆಗೆ ನಿಂದನೆ, ಇತ್ತೀಚಿನ ಕೆಲವೇ ದಿನಗಳಲ್ಲಿ ನಡೆದ ಈ ಮೂರು ಘಟನೆಗಳು ಬಿಜೆಪಿಯ ಮಹಿಳಾ ವಿರೋಧಿ ಧೋರಣೆಯನ್ನು ಬೆತ್ತಲಾಗಿಸಿವೆ. ಬೊಮ್ಮಾಯಿ ಅವರೇ ಮಹಿಳೆಯರ ಘನತೆ ನಿಮ್ಮ ಅದ್ಯತೆ ಎಂದು ಕುಟುಕಿದೆ.

ಇದನ್ನೂ ಓದಿ : –  ಪಿಎಫ್ ಐ ಮುಖಂಡರ ವಿಚಾರಣೆ ವೇಳೆ ಸ್ಪೋಟಕ ಸತ್ಯ ಬಯಲು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!