ಚಾಮರಾಜನಗರ (Chamrajnagar) ದಲ್ಲಿ ನೇರ ನೇಮಕಾತಿಗೆ ಒತ್ತಾಯಿಸಿ ಪೌರ ಕಾರ್ಮಿಕ (Civic workers) ರು ಪ್ರತಿಭಟನೆ (Protest) ನಡೆಸಿದ್ದಾರೆ. ಗುತ್ತಿಗೆ ಆಧಾರದ ನೌಕರರನ್ನು ಸರ್ಕಾರ ಖಾಯಂಗೊಳಿಸಬೇಕು . ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಪೌರ ಕಾರ್ಮಿಕರು ಆಗ್ರಹಿಸಿದ್ದಾರೆ.
ಪೌರ ಕಾರ್ಮಿಕರು ಹಾಗೂ ವಾಹನ ಚಾಲಕರು ದೈನಂದಿನ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಗಮನಹರಿಸಿಲ್ಲ.
ಗುತ್ತಿಗೆ ಪೌರಕಾರ್ಮಿಕರಿಗೆ ಯಾವುದೇ ಸೇವಾಭದ್ರತೆಯಿಲ್ಲದೆ ಜೀವನ ದುಸ್ಥಿತಿಗೆ ತಲುಪಿದೆ. ಸರ್ಕಾರ ಕೂಡಲೇ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಎಂದು ಸರ್ಕಾರಕ್ಕೆ ಪೌರ ಕಾರ್ಮಿಕರು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : – ಕಾಂಗ್ರೆಸ್ ಪಕ್ಷದಲ್ಲಿ ರಮೇಶ್ ಕುಮಾರ್ “ಶಕುನಿ” ಪಾತ್ರ – ಕೆ.ಎಚ್.ಮುನಿಯಪ್ಪ