ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ( siddaramiah ) ವಿರುದ್ಧ ಬಿಜೆಪಿ ( bjp ) ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೊಡಗಿನ ನಂತರ ಇದೀಗ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಪೊಲೀಸ್ ಭದ್ರತೆಯ ನಡುವೆಯೂ ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು. ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಜಿಲ್ಲಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಇದನ್ನೂ ಓದಿ : – ಮೊಟ್ಟೆ ಎಸೆತದಿಂದ ಆಕ್ರೋಶಗೊಂಡ ಸಿದ್ದರಾಮಯ್ಯ – RSS, ಬಿಜೆಪಿ ವಿರುದ್ಧ ವಾಗ್ದಾಳಿ
ಪ್ರವಾಸದ ಅಂಗವಾಗಿ ಮಕ್ಕಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಬಿಗಿ ಭದ್ರತೆ ನಡುವೆಯೂ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಈ ಪುಣ್ಯಭೂಮಿಗೆ ಬರುವುದು ಬೇಡ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಭೇಟಿ ನಂತರ ಸಿದ್ದರಾಮಯ್ಯ ಶೃಂಗೇರಿ ಕ್ಷೇತ್ರಕ್ಕೆ ತೆರಳಿದ್ದಾರೆ.
ಇದನ್ನೂ ಓದಿ : – ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ- ಜಾಮೀನು ಮಂಜೂರು