ಕೊನೆಗೂ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ

ಕೊನೆಗೂ ರಾಜ್ಯ ಸರ್ಕಾರ ( STATE GOVEREMENT ) ಚಿತ್ರದುರ್ಗದ ಮುರುಘಾಮಠ ( MURUGA MATA ) ಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ.

ಕೊನೆಗೂ ರಾಜ್ಯ ಸರ್ಕಾರ ( STATE GOVEREMENT ) ಚಿತ್ರದುರ್ಗದ ಮುರುಘಾಮಠ ( MURUGA MATA ) ಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನ ಮುರುಘಾಮಠದ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಪಿಎಸ್ ವಸ್ತ್ರದ್ ಅವರನ್ನು ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್  ( T.C KANTHRAJU ) ಅವರು ಇಂದು ಆದೇಶ ಹೊರಡಿಸಿದ್ದಾರೆ. ಮಠದ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಲಾಗಿದೆ. ವಸ್ತ್ರದ್ ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಇದನ್ನು ಓದಿ : – ನಾನು ಉತ್ತರ ಕರ್ನಾಟಕ ಪ್ರವಾಸ ಮಾಡ್ತೇನೆ – ಮಾಜಿ ಸಿಎಂ ಸಿದ್ದರಾಮಯ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!