ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ( vidhan parishath ) ಸದಸ್ಯರುಗಳಿಗೆ ಮಾತ್ರ ಸೀಮಿತವಾಗಿದ್ದ ರೇಸಾರ್ಟ್ ರಾಜಕಾರಣ ಈಗ ಗ್ರಾಮ ಪಂಚಾಯಿತಿ ಸದಸ್ಯರ ಮಟ್ಟಕ್ಕೂ ಬಂದು ನಿಂತಿದೆ. ಬೆಂಗಳೂರಿನ ರೆಸಾರ್ಟ್ ನಲ್ಲಿ 40 ದಿನ ಗ್ರಾಮ ಪಂಚಾಯಿತಿ ಸದಸ್ಯರು ವಾಸ್ತವ್ಯ ಹೂಡಿದ್ದಾರೆ. ಗ್ರಾ.ಪಂ ಅಧ್ಯಕ್ಷರನ್ನು ಕೆಳಗಿಳಿಸಲು ವಿಮಾನದಲ್ಲಿ ಗ್ರಾ.ಪಂ ಸದಸ್ಯರು ಬಂದಿದ್ದಾರೆ.
ಆಪರೇಶನ್ ಕಮಲದ ಮಾದರಿಯಲ್ಲೇ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ( DEVARA GUDDA ) ಗ್ರಾಮ ಪಂಚಾಯ್ತಿ ಸದಸ್ಯರ ಆಪರೇಶನ್ ಗ್ರಾಮ ಪಂಚಾಯಿತಿ ಆಗಿದೆ. ದೇವರಗುಡ್ಡ ಗ್ರಾಮ ಪಂಚಾಯತಿ ಒಟ್ಟು 13 ಸದಸ್ಯರನ್ನೊಳಗೊಂಡಿದೆ. ಮಾಲತೇಶ ದುರಗಪ್ಪ ನಾಯರ್ ಗ್ರಾ.ಪಂ ಹಾಲಿ ಅಧ್ಯಕ್ಷರಾಗಿದ್ದರು. ಅಧ್ಯಕ್ಷರ ಆಡಳಿತಾವಧಿ ವಿಚಾರದಲ್ಲಿ ನಡೆದ ಒಪ್ಪಂದದಂತೆ 15 ತಿಂಗಳು ಅಧಿಕಾರ ನಡೆಸುವುದಾಗಿ ಮಾಲತೇಶ್ ಹೇಳಿದ್ರು. 15 ತಿಂಗಳ ಬಳಿಕ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವುದಾಗಿ ಮಾಲತೇಶ್ ಪ್ರಮಾಣ ಮಾಡಿದ್ದರು. ಆದರೆ 15 ತಿಂಗಳಾದರೂ ಅಧ್ಯಕ್ಷ ಸ್ಥಾನ ಬಿಟ್ಟುಕೊಡದೇ ಮಾಲತೇಶ್ ಸತಾಯಿಸಿದ್ದರು. ಇದನ್ನೂ ಓದಿ : – ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿದ್ದ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರ ಬಂದ್….!
ಹೀಗಾಗಿ ಗ್ರಾ.ಪಂ ಅಧ್ಯಕ್ಷ ಮಾಲತೇಶ್ ( MALATESH ) ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆಗೆ ಸದಸ್ಯರು ನಿರ್ಧರಿಸಿದ್ದರು. ಒಟ್ಟು 13 ಜನ ಗ್ರಾ.ಪಂ ಸದಸ್ಯರಲ್ಲಿ 9 ಸದಸ್ಯರು ಸಂತೋಷ್ ಭಟ್ ಗುರೂಜಿ ಬಣದವರು. ಇನ್ನುಳಿದ ನಾಲ್ವರು ಬಿಜೆಪಿ ಸದಸ್ಯರಾಗಿದ್ರು. ಗ್ರಾ.ಪಂ ಅಧ್ಯಕ್ಷ ಮಾಲತೇಶ್ ಮಾತಿಗೆ ತಪ್ಪಿದ ಕಾರಣ ಅವಿಶ್ವಾಸ ನಿರ್ಣಯಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಮಾಲತೇಶ್ ಗ್ರಾ.ಪಂ ಸದಸ್ಯರನ್ನು ಹೈಜಾಕ್ ಮಾಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರಿನ ರೆಸಾರ್ಟ್ ಗೆ ಸಂತೋಷ್ ಭಟ್ ಗುರೂಜಿ ಕಳಿಸಿಕೊಟ್ಟಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆಯನ್ನು ತಾಲೂಕು ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ನಡೆಸಿದ್ದಾರೆ.
ಇದನ್ನೂ ಓದಿ : – ಕುತೂಹಲ ಮೂಡಿಸಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಭೇಟಿ…!