ಹಾವೇರಿ ( HAVERI ) ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ವ್ಯಕ್ತಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು 32 ವರ್ಷದ ಜಾಫರ್ ಕನ್ಯಾನವರ ಎಂದು ಗುರುತಿಸಲಾಗಿದೆ.
ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಜಾಫರ್ ನ ಕೃತ್ಯ ಸೆರೆಯಾಗಿದೆ. ದೇವಸ್ಥಾನದ ಆವರಣದಲ್ಲಿ ಮಲಗಿ, ಎದ್ದು ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನ ಅಪವಿತ್ರಗೊಳಿಸಿದ ಎಂದು ಆರೋಪಿಸಿದ್ದಾರೆ. ಆರೋಪಿ ಜಾಫರ್ ವಿರುದ್ಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ :- ಬಳ್ಳಾರಿಯಲ್ಲಿ ಕಲುಷಿತ ನೀರು ಸೇವನೆ- ವಾಂತಿ ಬೇಧಿಗೆ ಬಾಲಕಿ ಸಾವು