ಸಿದ್ದರಾಮಯ್ಯ (SIDDARAMAIAH) ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿಗಳ ಗಡಿಪಾರು ಮಾಡಲು ಮುಂದಾಗಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಕೊಡಗು ಜಿಲ್ಲೆಯ ಮಡಿಕೇರಿ(MADIKERI)ಯಲ್ಲಿ ಪ್ರತಿಭಟನೆ ನಡೆಸಿವೆ.
ಆರೋಪಿಗಳ ಗಡಿಪಾರಿಗೆ ಪೊಲೀಸ್ ಇಲಾಖೆಯು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಹಿಂದೂ ಕಾರ್ಯಕರ್ತರು, ಗಡಿಪಾರು ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಮಡಿಕೇರಿ ನಗರದ ಜ. ತಿಮ್ಮಯ್ಯ ವೃತ್ತದಲ್ಲೂ ಪ್ರತಿಭಟನೆ ನಡೆಯಿತು. ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಕವನ್ ಕಾವೇರಪ್ಪ, ವಿನಯ್ ಗಡಿಪಾರಿಗೆ ಪೊಲೀಸ್ (POLICE) ಇಲಾಖೆ ಶುಫಾರಸು ಮಾಡಿದ ಹಿನ್ನಲೆ ಎಸಿ ಯತೀಶ್ ಉಲ್ಲಾಳ್ ಅವರು ಆರೋಪಿಗಳಿಗೆ ನಿನ್ನೆ ನೋಟಿಸ್ ಜಾರಿ ನಿಮನ್ನು ಯಾಕೆ ಗಡಿ ಪಾರು ಮಾಡಬಾರದೆಂದು ಕಾರಣ ಕೇಳಿದ್ದರು. ಇದನ್ನುಓದಿ :- ‘ಕೈ’ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದಾಖಲೆ ಸಮೇತ 3728 ಪುಟಗಳ ದೂರು!
ಪ್ರಜಾಪ್ರಭುತ್ವ, ಜಾತ್ಯಾತೀತೆ ಬಗ್ಗೆ ಮಾತನಾಡುವ ಮಾಜಿ ಮುಖ್ಯಮಂತ್ರಿಯೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದ ವಿರುದ್ಧ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.
ಇದನ್ನುಓದಿ :- ಬಿಜೆಪಿಗೆ ಸಂದೇಶ್ ನಾಗರಾಜ್ ರಾಜೀನಾಮೆ- ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ